ಮಂಗಳೂರು, ನ 14 (MSP): ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನದ ಬಗ್ಗೆ ಮಂಗಳೂರು ಮುಸ್ಲಿಮ್ಸ್ ಎಂಬ ಪೇಸ್ ಬುಕ್ ಪೇಜ್ ನಲ್ಲಿ ಅವಹೇಳಕಾರಿಯಾಗಿ ಪೋಸ್ಟ್ ಗಳನ್ನು ಹಾಕಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ದ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದ. ಕನ್ನಡ ಜಿಲ್ಲಾ ಬಿಜೆಪಿ ದೂರು ನೀಡಿದೆ. ಮಂಗಳೂರು ಮುಸ್ಲಿಮ್ಸ್ ಹೆಸರಿನ ಪೇಸ್ ಬುಕ್ ಪೇಜ್ ನಲ್ಲಿ ಸಚಿವ ಅನಂತ್ ಕುಮಾರ್ ಸಾವಿಗೆ ಸಂಭ್ರಮಿಸಿ ನ.12 ರಂದು ಪೋಸ್ಟ್ ಮಾಡಲಾಗಿತ್ತು.
ಅವಹೇಳನಕಾರಿ ಹಾಗೂ ದ್ವೇಷಪೂರಿತ ಪೋಸ್ಟ್ ಗಳನ್ನು ಹಾಕಿರುವವವರು ನಿರಂತರವಾಗಿ ಈ ರೀತಿಯ ಕೃತ್ಯಗಳನ್ನು ಎಸಗುತ್ತಿದ್ದು ಶಾಂತಿ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಂಡು ಇಂತಹ ಕೃತ್ಯಗಳಲ್ಲಿ ತೊಡಗದಂತೆ ತಡೆಯಬೇಕು ಎಂದು ಬಿಜೆಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ ಅವರು ಪೊಲೀಸ್ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ. ಪ್ರಕರಣದ ಬಗ್ಗೆ ಪಾಂಡೇಶ್ವರ ಪೊಲೀಸರು ಈಗಾಗಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.