ಉಳ್ಳಾಲ, ಅ.20 (DaijiworldNews/PY): ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಚೂರಿ ಇರಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಪ್ರಾಪ್ತ ವಯಸ್ಸಿನ ಯುವಕ ಎಂದು ಗುರುತಿಸಲಾಗಿದೆ.
ಉಳ್ಳಾಲದ ಗ್ಯಾಸ್ ಸ್ಟವ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾದವರು
ಈ ಹಿಂದೆ ಆರೋಪಿ ಹರೀಶ್ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಹರೀಶ್ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದೇ ಕೋಪದಿಂದ ಆರೋಪಿ ಹರೀಶ್ಗೆ ಚೂರಿಯಿಂದ ಇರಿದು ತಲೆಮರೆಸಿಕೊಂಡಿದ್ದನು.
ಘಟನೆಯ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.