ಕಾಸರಗೋಡು, ಅ.20 (DaijiworldNews/PY): ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕದಲ್ಲಿ ನಡೆದಿದೆ.
ಮೃತರನ್ನು ಮುಂಡ್ಯತ್ತಡ್ಕದ ಜನಾರ್ಧನ (34) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಸಾಮಗ್ರಿ ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ಧನ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು. ಇಂದು ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದ ಗೇರು ಮರದ ರೆಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.