ಮಂಗಳೂರು, ಅ. 20 (DaijiworldNews/SM): ಎಐಸಿಸಿ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಅವರ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದು, ಮಂಗಳೂರಿನಲ್ಲಿ ನಳಿನ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂದರ್ಭದಲ್ಲಿ ನಳಿನ್ ಕುಮಾರ್ ಈ ಹೇಳಿಕೆಯನ್ನು ನೀಡಿದ್ದರು. ಇದರ ವಿರುದ್ಧ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಈ ಹೇಳಿಕೆಯನ್ನು ವಿರೋಧಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರ ಪ್ರತಿಭಟನೆ, ಆಕ್ರೋಶ ಕೂಡ ಹೆಚ್ಚಾಗಿದೆ.
ನಳಿನ್ ಹೇಳಿಕೆ ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನೀಡಿರುವ ಹೇಳಿಕೆಯ ಬಗ್ಗೆ ಕ್ಷಮೆಯಾಚಿಸುವಂತೆಯೂ ಕೂಡ ಮನವಿ ಮಾಡಲಾಗಿದೆ.