ಮಂಗಳೂರು, ಅ. 21 (DaijiworldNews/SM): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ 2020ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ.
ನವದೆಹಲಿಗೆ ಆಗಮಿಸುವಂತೆ ಹರೇಕಳ ಹಾಜಬ್ಬಗೆ ಪತ್ರ ಬಂದಿದೆ. ಈ ಹಿನ್ನೆಲೆಯಲ್ಲಿ ತನ್ನ ಸಹಾಯಕ ಜೊತೆ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನವಂಬರ್ 8ರಂದು ದೆಹಲಿಗೆ ತಲುಪಿ ಅಲ್ಲಿನ ಅಶೋಕ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಈ ಹಿಂದೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನವಾಗದೇಕಿತ್ತು. ಆದರೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಬ ಮುಂದೂಡಲ್ಪಟ್ಟಿತ್ತು. ಇದೀಗ ನವಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರಧಾನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.