ಮಂಗಳೂರು, ಅ 23 (DaijiworldNews/MS): ಕೂಳೂರು ವಿ ಆರ್ ಎಲ್ ಮುಂಭಾಗದಲ್ಲಿದ್ದ ಕೊಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.