ಕಾಸರಗೋಡು, ಅ.23 (DaijiworldNews/HR): ಬೆಂಕಿ ತಗಲಿ ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಪೈವಳಿಕೆ ನಗರ ಸರಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 14 ರಂದು ಸಂಜೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ವಸ್ತ್ರಕ್ಕೆ ಬೆಂಕಿ ತಗಲಿದ ಪರಿಣಾಮ ಗಂಭೀರ ಸುತ್ತ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.