ಮಂಗಳೂರು, ಅ 15: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸ ಘಟನೆ ನಿನ್ನೆ ಮಂಗಳೂರಿನ ಕರಂಗಲ್ಪಾಡಿಯಲ್ಲಿ ನಡೆದಿದೆ. ಬಂಧಿತರನ್ನು ಬಂಟ್ವಾಳ ನಿವಾಸಿ ಸಂತೋಷ್ ಕುಮಾರ್, ಬಿಜೈ ನಿವಾಸಿ ದೀಪಕ್, ತೊಕ್ಕೊಟ್ಟೂ ನಿವಾಸಿ ನವೀನ್, ದಾವಣಗೆರೆ ಮೂಲದ ಆಶಾ ಎಂದು ಗುರುತಿಸಲಾಗಿದೆ. ಆರೋಪಿ ಆಶಾ ಎಂಬಾಕೆ ಅಪಾರ್ಟ್ ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ 21500 ರೂಪಾಯಿ ನಗದು, 2ಮೊಬೈಲ್ ಫೋನ್, 2 ಬೈಕ್ ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.