ಪುತ್ತೂರು, ಅ. 27 (DaijiworldNews/SM): ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳಗಾದ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಡಿದೆ. ಆರೋಪಿ ಪರ ಖ್ಯಾತ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.