ಬಂಟ್ವಾಳ, ಅ 30 (DaijiworldNews/MS):ಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್ಗಳು, ನರ್ಬಾರ್ಡ್ ಮತ್ತು ಇತರೇ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅ.30ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಂಟವಾಳದ ಬಂಟರ ಭವನದಲ್ಲಿ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ. ಎಸ್., ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಘನ ಉಪಸ್ಥಿತಿವಹಿಸುವರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೈಕ್ ಯು. ಸ್ಟಾಲ್ ಉದ್ಘಾಟಿಸುವರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ. ವೈ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕ ಉಮಾನಾಥ್.ಎ. ಕೋಟ್ಯಾನ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್. ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್ ಕೆ., ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಬಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ, ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬಿ.ತುಂಬೆ, ದ.ಕ ಜಿಲ್ಲಾ ಕೇಂದ್ರ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮುಖ್ಯ ಮಂತ್ರಿಯವರ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಬಿ.ಚಂದ್ರಶೇಖರ ರಾವ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ನಬಾರ್ಡ್ನ ಡಿಡಿಎಂ ಸಂಗೀತಾ ಎಸ್.ಕರ್ತ, ಕೆನರಾ ಬ್ಯಾಂಕ್ನ ಮಹಾ ಪ್ರಬಂಧಕ ಯೋಗೀಶ್ ಆಚಾರ್ಯ, ಬ್ಯಾಂಕ್ ಆಫ್ ಬರೋಡಾದ ವಲಯ ಮಹಾ ಪ್ರಬಂಧಕ ಗಾಯತ್ರಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮಹಾ ಪ್ರಬಂಧಕ ಎಂವಿ ಬಾಲಸುಬ್ರಹ್ಮಣ್ಯಂ, ಭಾರತೀಯ ಸ್ಟೇಟ್ ಬ್ಯಾಂಕ್ನ ಉಪಮಹಾ ಪ್ರಬಂಧಕ ರಾಜೇಶ್ ಗುಪ್ತಾ, ಕರ್ನಾಟಕ ಬ್ಯಾಂಕ್ ಲಿಮಿಟೆಡ್ನ ಮಹಾಪ್ರಬಂಧಕ ವಿನಯ ಭಟ್ ವಿ.ಜೆ, ಕೆ.ವಿ.ಜಿ.ಬಿ. ಪ್ರಾದೇಶಿಕ ವ್ಯವಸ್ಥಾಪಕ ಸೂರ್ಯ ನಾರಾಯಣ, ಐ.ಒ.ಬಿ.ಪ್ರಾದೇಶಿಕ ವ್ಯವಸ್ಥಾಪಕ ಅಮಿತ್ ಕುಮಾರ್, ಫೆಡರಲ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಶ್ರೀಕಾಂತ್.ಕೆ, ಸೀನಿಯರ್ ಸುಪರಿಂಟೆಂಡೆಂಟ್ ಆಫ್ ಪೋಸ್ಟ್ ಹರ್ಷ ಎನ್ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು