ವಿಟ್ಲ, ಅ. 30(DaijiworldNews/HR): ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಅ. 29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಧ್ಯಾಹ್ನದ ವೇಳೆ ತಂದೆ-ತಾಯಿ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821