ಮಂಗಳೂರು, ಅ. 31 (DaijiworldNews/SM): ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಕೊನೆಗೂ ಆತನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್(46) ಬಂಧಿತ ಆರೋಪಿಯಾಗಿದ್ದಾನೆ. ಈತ ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನೊಂದಿಗೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾದ್ಯತೆಗಳು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆತ ಮನೆಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪೊಲೀಸರ ಮೇಲೆ ಎರಗಿ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಆತನನ್ನು ಬೆನ್ನಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.