ಬೆಳ್ತಂಗಡಿ, ನ17(SS): ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನ.12ರ ಸೋಮವಾರ ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅನಂತ ಕುಮಾರ್ ಹೆಸರಲ್ಲಿ ಕ್ಯಾನ್ಸರ್ ಅಧ್ಯಯನ ಕೇಂದ್ರ ಆರಂಭಿಸಬೇಕು ಎಂದು ಪ್ರಧಾನಿ ಮೋದಿಗೆ ಟ್ವೀಟ್ ಮುಖಾಂತರ ತಿಳಿಸಿದ್ದಾರೆ.
ಹಲವಾರು ಜನ ಕ್ಯಾನ್ಸರ್ ಸಂಬಂಧಿ ಖಾಯಿಲೆಗಾಗಿ ತುತ್ತಾಗುತ್ತಿದ್ದಾರೆ. ಬೇರೆ ಬೇರೆ ಕಾರಣಗಳಿಂದ ಕ್ಯಾನ್ಸರ್ ಇತ್ತೀಚೆಗೆ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಇದರಿಂದಾಗಿ ದೇಶದಲ್ಲಿ ಪ್ರತಿವರ್ಷ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪುವವರ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಅಧ್ಯಯನ ಕೇಂದ್ರ ಆರಂಭಿಸಲು ಹರೀಶ್ ಪೂಂಜ ಮೋದಿಯವರಲ್ಲಿ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ