ಬಂಟ್ವಾಳ, ನ. 01 (DaijiworldNews/SM): ರಾಷ್ಟ್ರೀಯ ಹೆದ್ದಾರಿಯಲ್ಲಿ 75ರ ಮೆಲ್ಕಾರಿನಲ್ಲಿ ಕಂಟೈನರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಬೈಕ್ ಸವಾರ ಇರಾ ಪಂಜಾಜೆ ನಿವಾಸಿ ತಿಲಕ್(29) ಮೃತ ದುರ್ದೈವಿ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ತಿಲಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.