ನೆಲ್ಯಾಡಿ, ನ. 02 (DaijiworldNews/HR): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದು ನಾಲ್ವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ಹೆದ್ದಾರಿ ಬದಿಯ ಸುಮಾರು 10ಅಡಿ ಆಳದ ಕಂದಕಕ್ಕೆ ಬಿದ್ದಿದೆ.
ಟೆಂಪೋ ಟ್ರಾವೆಲರ್ ನಲ್ಲಿ ಸುಮಾರು 12 ಮಂದಿಯಿದ್ದು, ಅದರಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಬೆಂಗಳೂರು ಮೂಲದವರು ಎಂದು ವರದಿಯಾಗಿದೆ.
ಇನ್ನು ಅವಘಢದಲ್ಲಿ ಗಾಯಗೊಂಡವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.