ಕಾಪು, ನ 06 (DaijiworldNews/MS): ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನ. 11 ರ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ ಎಂದು ತಿಳಿದುಬಂದಿದೆ.
ಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ಚೇತರಿಸಿಕೊಂಡಿದ್ದ ರೋಹಿತ್ ಅವರಿಗೆ ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ