ಉಡುಪಿ, ನ 18(SM): ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ನಗರದ ಒಳಕಾಡು ನಿವಾಸಿ ಹೊಟೇಲ್ ಕಾರ್ಮಿಕ ಗಣೇಶ್ ಭಟ್(50) ನಾಪತ್ತೆಯಾಗಿದ್ದರು.
ಅವರ ಪತ್ತೆಗೆ ಕುಟುಂಬ ಸದಸ್ಯರು ಹುಡುಕಾಟ ನಡೆಸಿದ್ದರು. ಆದರೆ ಪತ್ತೆಯಾಗದಿದ್ದಂತಹ ಸಂದರ್ಭ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಅಂತಿಮವಾಗಿ ಮೊಬೈಲ್ ಲೊಕೇಷನ್ ಆಧಾರದಲ್ಲಿ ಪ್ರಕರಣವನ್ನು ಬೇರ್ಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನು ಜೀವನದಲ್ಲಿ ಜಿಗುಪ್ಸೆಗೊಂಡು ಗಣೇಶ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೃತನ ಸಂಬಂಧಿಕರು ಶವವನ್ನು ಗುರುತಿಸಿದ್ದಾರೆ. ಪೊಲೀಸ್ ತನಿಖೆ ಪ್ರಗತಿಯಲ್ಲಿದ್ದು, ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಶವ ಬಾವಿಯಿಂದ ಮೇಲೆತ್ತಲು ಪೊಲೀಸ್ ಇಲಾಖೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದಾರೆ.