ಮಂಗಳೂರು, ನ.08 (DaijiworldNews/PY): ಮಂಗಳೂರಿನ ತಣ್ಣೀರು ಬಾವಿ ಬೀಚ್ನಲ್ಲಿ ಖ್ಯಾತ ಮರಳು ಶಿಲ್ಪ ಕಲಾವಿದ ಹರೀಶ್ ಅವರು ಕನ್ನಡದ ಖ್ಯಾತ ನಟ, ಪುನೀತ್ ರಾಜ್ ಕುಮಾರ್ ಅವರ ಮರಳು ಶಿಲ್ಪವನ್ನು ರಚಿಸುವ ಮೂಲಕ ಅಗಲಿದ ಅಪ್ಪು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಈ ವೇಳೆ ಮಾತನಾಡಿದ ಹರೀಶ್ ಆಚಾರ್ಯ ಅವರು, "ನಾನು ಹಾಗೂ ನನ್ನ ಸ್ನೇಹಿತು ಸೇರಿ ಪುನೀತ್ ರಾಜ್ ಕುಮಾರ್ ಅವರ ಮರಳು ಶಿಲ್ಪವನ್ನು ರಚಿಸಿದ್ದೇವೆ. ಇದನ್ನು ರಚಿಸಲು ನಮಗೆ 4-5 ಗಂಟೆ ಬೇಕಾಯಿತು. ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲೇಂದೇ ನಾವು ಈ ಮರಳು ಶಿಲ್ಪವನ್ನು ರಚಿಸಿದ್ದೇವೆ" ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯ ನೆರವೇರಿಸಲಾಯಿತು. ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಯವರೆಗೆ ಕಂಠೀರವ ಸ್ಟುಡಿಯೋ ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 12 ಗಂಟೆ ಬಳಿಕ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ.