ಬೆಂಗಳೂರು,ನ 19(MSP): ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧಿಸಿದ್ದ ಸರ್ಕಾರ ಇದೀಗ ಸಾರ್ವಜನಿಕ ಸ್ಥಳವಾದ ಹೋಟೆಲ್, ಬಾರ್, ರೆಸ್ಟೋರೆಂಟ್, ಕ್ಲಬ್ಗಳಲ್ಲಿಯೂ ಇನ್ಮುಂದೆ ಸಿಗರೇಟ್ ಮತ್ತು ತಂಬಾಕು ಸೇವನೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾಯ್ದೆ ಪ್ರಕಾರ ಈ ಆದೇಶವನ್ನು ಹೊರಡಿಸಲಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ನಡೆಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಹೋಟೆಲ್, ಬಾರ್, ರೆಸ್ಟೋರೆಂಟ್, ಪಬ್ ಕ್ಲಬ್ಗಳಲ್ಲಿಯೂ ಇನ್ಮುಂದೆ ನೋ ಸ್ಮೋಕಿಂಗ್ ಏರಿಯಾಗಳಾಗಳಿವೆ. ಇಲ್ಲಿ ಇನ್ಮುಂದೆ ಧೂಮಪಾನ ಮಾಡುವಂತಿಲ್ಲ. ಧೂಮಪಾನ ನಿಷೇಧಿಸಿ ಆದೇಶ ಇಂದಿನಿಂದಲೇ ಈ ಆದೇಶ ಜಾರಿಯಾಗಿದೆ. ಒಂದು ವೇಳೆ ಸರ್ಕಾರದ ಈ ಆದೇಶವನ್ನು ಪಾಲಿಸದಿದ್ದರೆ ಅಂತಹ ಹೋಟೆಲ್, ರೆಸ್ಟೋರೆಂಟ್ ಕ್ಲಬ್ಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದ್ದಾರೆ
ಇದೇ ವೇಳೆ ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳಿಗೆ ನೀಡಲಾಗುತ್ತಿರುವ ತೆರಿಗೆ ರಿಯಾಯಿತಿಯನ್ನು ರದ್ದುಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.