ಮಂಗಳೂರು, ನ 19(MSP): ಶಬರಿಮಲೆ ವಿವಾದ ವಿಚಾರದಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ಅಸಮಾಧಾನ ಹಾಗೂ ಅಯ್ಯಪ್ಪ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ನವೆಂಬರ್ 20 ರಂದು ಶಬರಿಮಲೆಗೆ ತೆರಳಲಿದ್ದಾರೆ.
ನವೆಂಬರ್ 20 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಶಬರಿಮಲೆ ಅಯ್ಯಪ್ಪ ದರ್ಶನ ಮಾಡಲಿದ್ದಾರೆ ಜತೆಗೆ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರು ಎದುರಿಸುತ್ತಿರುವ ಸಮಸ್ಯೆ ಮತ್ತು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಸ್ಥಿತಿಗಳನ್ನು ಅಧ್ಯಯನ ಮಾಡಿ ವರದಿ ತಯಾರಿಸಿ ಅದನ್ನು ರಾಷ್ಟ್ರೀಯ ಬಿಜೆಪಿ ನಾಯಕರಿಗೆ ಸಲ್ಲಿಸಲಿದ್ದಾರೆ.
ನಳಿನ್ ಕುಮಾರ್ ಕಟೀಲ್ ಇವರೊಂದಿಗೆ ಕೇರಳದ ಬಿಜೆಪಿ ಮಾಜಿ ಅಧ್ಯಕ್ಷ ವಿ.ಮುರಳೀದರ್ ಇವರು ಕೂಡಾ ತೆರಳಲಿದ್ದಾರೆ.