ಕಾಸರಗೋಡು, ನ. 10 (DaijiworldNews/SM): ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹರಸಾಹಸ ಮಾಡುತ್ತಿದ್ದು, ದಿನದಿಂದ ದಿನಕ್ಕೆ ಏರಿಳಿತಗಳು ಕಂಡುಬರುತ್ತಿವೆ. ಬುಧವಾರದಂದು ಜಿಲ್ಲೆಯಲ್ಲಿ 164 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಬುಧವಾರದಂದು ಜಿಲ್ಲೆಯಲ್ಲಿ 135 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 745 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 6,543 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,39,814 ಮಂದಿಗೆ ಸೋಂಕು ದ್ರಢಪಟ್ಟಿದ್ದು, ಈ ಪೈಕಿ 1,37,898 ಮಂದಿ ಗುಣಮುಖರಾಗಿದ್ದಾರೆ.