ಬೆಳ್ತಂಗಡಿ, ನ. 12 (DaijiworldNews/SM): ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು 13,75,930 ರೂ. ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.