ಕಾರ್ಕಳ, ನ 20(SM): ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿಯ ತಂದೆ ಗೋಪಾಲ್ ರಾವ್ ಇತ್ತೀಚೆಗೆ ನಿಧನ ಹೊಂದಿದ್ದ ಪರಿಣಾಮ, ನಕ್ಸಲ್ ತಂಡ ಆ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಸಂದೇಹದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸರಹದ್ದಿನಲ್ಲಿ ನಕ್ಸಲ್ ನಿಗ್ರಹದಳದಿಂದ ಕೂಬಿಂಗ್ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸುಮಾರು ನೂರು ಜನ ನಕ್ಸಲ್ ನಿಗ್ರಹದಳದ ಸಿಬ್ಬಂದಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಸ್ಥಳೀಯ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಅವರ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಬುಗಡಿಬೈಲಿನ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.