ಉಡುಪಿ, ನ.14 (DaijiworldNews/PY): ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ನ.13ರ ಶನಿವಾರ ಅಂಬಾಗಿಲು ಬಳಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ.
ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಪ್ರಣಮ್ಯಳ ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದರೆ, ಬಾಲಕಿ ಮೇಲೆ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.