ಕಾಸರಗೋಡು, ನ.15 (DaijiworldNews/HR): ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಕಾಞ೦ಗಾಡ್ನ ಕುಳಿಯಂಗಾಲ್ನಲ್ಲಿ ನಡೆದಿದ್ದು, ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಪರಾರಿಯಾಗಿದೆ.
ಮೃತಪಟ್ಟವರನನು ಸುಧೀಶ್ (37) ಎಂದು ಗುರುತಿಸಲಾಗಿದೆ.
ಲಾಟರಿ ಟಿಕೆಟ್ ಮಾರಾಟಗಾರರಾಗಿದ್ದ ಸುಧೀಶ್ ರಾತ್ರಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅತೀ ವೇಗದಲ್ಲಿ ಬಂದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಸುಧೀಶ್ ರನ್ನು ಕಾಞ೦ಗಾಡ್ ನ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.