ಮಂಗಳೂರು ನ 22(MSP): ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ವಿನಾಃ ಕಾರಣ ವಜಾ ಮಾಡಿದ್ದು, ಅವರ ಮರು ನೇಮಕವಾಗಬೇಕು ಎಂದು ಒತ್ತಾಯಿಸಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಕಚೇರಿಯೆದುರು ನೌಕರರು ನ.22ರ ಗುರುವಾರದಂದು ಧರಣಿ ನಡೆಸಿದ್ದಾರೆ.
ಕಾರ್ಮಿಕರನ್ನು ವಜಾ ಮಾಡಿದ್ದು ಅಲದೆ, ಇತರ ಕಾರ್ಮಿಕರಿಗೆ ಸಂಬಳ ನೀಡದೆ ಸತಾಯಿಸುತ್ತಿರುವ ಸಾಯಿ ಸೆಕ್ಯುರಿಟಿ ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಈ ಗುತ್ತಿಗೆ ಕಾರ್ಮಿಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಸಮಸ್ಯೆ ಪರಿಹಾರವಾಗದೆ ಇಲ್ಲಿಂದ ಕದಲುವುದಿಲ್ಲ ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.