ಉಡುಪಿ, ನ.21 (DaijiworldNews/HR): ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶಾಸಕ ರಘುಪತಿ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
-
ಉಡುಪಿ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ಇಂದು ನಡೆದ ಕರ್ನಾಟಕ ರಾಜ್ಯದ "ಜಿಲ್ಲಾ ಬ್ಯಾಡ್ಮಿಂಟನ್ ಅಸೋಶಿಯೇಷನ್" ಗಳ ಸಭೆಯಲ್ಲಿ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿ ಉಡುಪಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಅವಿರೋಧವಾಗಿ ಆಯ್ಕೆಯಾದರು.
ಕರ್ನಾಟಕ ರಾಜ್ಯದ ಅಯಾ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗಳ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಇನ್ನು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.