ಮಂಗಳೂರು, ಅ 15: ವಾಮಂಜೂರಿನ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಸಂಗಮಗೊಂಡು, ವಿಶೇಷ ಸಭೆಯನ್ನು ನಡೆಸಿದರು. ಕಳೆದ ಹಲವು ವರ್ಷಗಳಿಂದ ಈ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು ಉತ್ತಮ ಜೀವನವನ್ನು ರೂಪಿಸಿಕೊಂಡ ಹಳೆ ವಿದ್ಯಾರ್ಥಿಗಳು ಮತ್ತೆ ತಮ್ಮ ಶಾಲೆಯ ಕಡೆಗೆ ಮುಖ ಮಾಡಿದ್ದಾರೆ.
ವಾಮಂಜೂರಿನ ಸಂತ ಜೋಸೆಫ್ ಶಾಲೆಯಲ್ಲಿ ಸೇರಿದ ಹಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವುದರ ಜೊತೆಗೆ ತಾವು ಕಲಿತ ಶಾಲೆಯ ಅಭಿವೃದ್ಧಿ ಕಾರ್ಯವನ್ನು ಮಾಡುವಂತಹ ಕೆಲವು ಮಹತ್ತರ ನಿರ್ಣಯಗಳನ್ನು ಈ ಸಭೆಯಲ್ಲಿ ತೆಗೆದುಕೊಂಡರು. ಶಾಲೆಯ ಆರಂಭದಿಂದ ಈವರೆಗೆ ಕಲಿತ ಹಲವಾರು ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಸಂತ ಜೋಸೆಫರ ಶಾಲೆಯ ವಿದ್ಯಾಭ್ಯಾಸದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಯೋಜನೆಯನ್ನು ರೂಪಿಸಿಕೊಂಡಿದ್ದಾರೆ. ಈ ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಂಶುಪಾಲರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲೇಶ್ ಅವರು ಉಪಾಧ್ಯಕ್ಷರಾಗಿ, ಲವೀಶ ಅವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದಾರೆ