ಮಂಗಳೂರು, ನ. 21 (DaijiworldNews/SM): ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಿದ ಪಾಪಿಗಳು ಚರಂಡಿಯಲ್ಲಿ ಮೃತದೇಹ ಎಸೆದ ಅಮಾನವೀಯ ಘಟನೆ ನಗರ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನವೆಂಬರ್ 21ರ ರವಿವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ.
ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ಇದಾಗಿದ್ದು, ಸಂಜೆ ನಾಲ್ಕು ಗಂಟೆಯಿಂದ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಬಾಲಕಿಗಾಗಿ ಕಾರ್ಖಾನೆ ಸೇರಿದಂತೆ ಹಲವೆಡೆ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಖಾನೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರು ಅದಗಲೇ ಬಾಲಕಿ ಸಾವನ್ನಪ್ಪಿದ್ದಳು.
ಇನ್ನು ಬಾಲಕಿಯನ್ನು ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದವರೇ ಹತ್ಯೆ ಮಾಡಿರುವ ಶಂಕೆಯನ್ನು ಆಕೆಯ ಪೋಷಕರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಈಗಾಗಲೇ ಹಲವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.