ಉಡುಪಿ, ನ 23 (DaijiworldNews/MS): ಶಾಲಾ ಶಿಕ್ಷಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 21 ರ ಭಾನುವಾರ ರಾತ್ರಿ ಅಲೆವೂರಿನಲ್ಲಿ ನಡೆದಿದೆ. ಅಮೃತಾ (32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
ಅಮೃತಾ ಅವರು ಸುಮಾರು 8 ವರ್ಷದಿಂದ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಭಾನುವಾರದಂದು ರಾತ್ರಿ ತಾನು ವಾಸವಿದ್ದ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ
ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.