ಬೆಂಗಳೂರು, ನ 23(MSP): ಪದವಿ ಪೂರ್ವ ಶಿಕ್ಷಣ ಮಂಡಳಿ ಹೊಸ ನಿಯಮವೊಂದನ್ನು ಜಾರಿಗೊಳಿಸಿದ್ದು ಇನ್ನು ಮುಂದೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ಬಳಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ.
ಈ ನಿಯಮವನ್ನು ಉಲ್ಲಂಘಿಸಿದ್ರೆ, ಪದವಿ ಪೂರ್ವ ಶಿಕ್ಷಣ ಮಂಡಳಿ ಹೊಸ ನಿಯಮಕ್ಕೆ ಕ್ಯಾರೇ ಅನ್ನದಿದ್ರೆ ಅಂಥವರಿಗೆ ಕಠಿಣ ಶಿಕ್ಷೆ ನೀಡುವ ಹಾಗೂ ಮೊಬೈಲ್ ಜಪ್ತಿ ಮಾಡುವ ಅವಕಾಶವು ಇಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರದ ಸೂಚನೆಯಂತೆ ಪದವಿ ಪೂರ್ವ ಶಿಕ್ಷಣ ಮಂಡಳಿ ಕಠಿಣವಾದ ನಿಯಮ ಜಾರಿ ಮಾಡಿದೆ.
ಮಕ್ಕಳ ಮನೋ ಏಕಾಗ್ರತೆ, ಡಿಜಿಟಲ್ ವಸ್ತುಗಳಿಂದ ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ಈ ನಿಷೇಧ ಹೇರಲಾಗಿದೆ. ಇತ್ತೀಚಿನ ದಿನಗಳಲ್ಲಿ ತರಗತಿ ವೇಳೆಯೇ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ಬುಕ್, ಕಾಲಹರಣ ಮಾಡುತ್ತಿದ್ದು, ಪರಿಣಾಮ ಕಲಿಕಾ ಸಾಮರ್ಥ್ಯ ಕಡಿಮೆಯಾಗಿ ಏಕಾಗ್ರತೆಯೂ ಇಲ್ಲದಂತಾಗಿತ್ತು. ಹೀಗಾಗಿ ಸರ್ಕಾರ ತರಗತಿಗಳಲ್ಲಿ ಮೊಬೈಲ್ ಮತ್ತು ಲಾಪ್ಟಾಪ್ ಬಳಕೆ ಮಾಡುವುದಕ್ಕೆ ನಿರ್ಬಂಧ ಹಾಕಿದೆ.