ಮಂಗಳೂರು, ನ 24 (DaijiworldNews/MS): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ನವೆಂಬರ್ 23ರ ಮಂಗಳವಾರ ಒಟ್ಟು ಏಳು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿತೀನ್ ಕುಮಾರ್, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಇಸ್ಮಾಯಿಲ್ ಶಾಫಿ ಕೆ, ಪಕ್ಷೇತರ ಅಭ್ಯರ್ಥಿಗಳಾಗಿ ಶಶಿಧರ ಎಂ, ನವೀನ್ ಕುಮಾರ್ ರೈ ಹಾಗೂ ಕೌಶಿಕ್ ಡಿ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.