ಕಾಪು, ನ 25 (DaijiworldNews/MS): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಸ್ವಾಗತ ನಗರದ ಬಳಿ ನ .25 ರ ಗುರುವಾರ ಬೆಳಗ್ಗೆ ನಡೆದಿದೆ.
ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಇದರಿಂದ ಅಂಗಡಿಯ ಒಂದುಬದಿಯ ಗೋಡೆ ಸಂಪೂರ್ಣ ದ್ವಂಸಗೊಂಡಿದೆ. ಈ ವೇಳೆ ಅಂಗಡಿಯಲ್ಲಿದ್ದ ಮಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ
ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.