ಮಂಗಳೂರು, ನ.26 (DaijiworldNews/PY): "ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನೆಆ ಕಾರ್ಯದರ್ಶಿ ಜಗದೀಶ್ ಕಾರಂತ ವಿರುದ್ದ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನೀಡಿರುವ ದೂರನ್ನ ಹಿಂಪಡೆಯಬೇಕು" ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ.
ನ.25ರ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂಜಾವೇ ಪ್ರಾಂತೀಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ, "ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲಿಸಿರುವುದು ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವವರ ಧ್ವನಿಯನ್ನು ಅಡಗಿಸುವ ಪ್ರಯತ್ನವಾಗಿದೆ" ಎಂದಿದ್ದಾರೆ.
"2007ರಿಂದ ಇಲ್ಲಿಯವರೆಗೆ ಕಾರಿಂಜ ದೇವಸ್ಥಾನದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ. ಈ ಹಿನ್ನೆಲೆ ನ.21ರಂದು ಕಾರಿಂಜ ರಥಬೀದಿಯಲ್ಲಿ ಹಿಂಜಾವೇ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಜನಜಾಗೃತಿ ಜಾಥಾ ನಡೆಸಲಾಗಿತ್ತು" ಎಂದು ತಿಳಿಸಿದ್ದಾರೆ.
"ಕಾರಿಂಜ ಕ್ಷೇತ್ರದಲ್ಲಿ ಹಾಕಲಾದ ಭಗವಧ್ವಜವನ್ನು ತೆಗೆಯಬೇಕು ಎಂದು ಪುಂಜಾಲಕಟ್ಟೆ ಠಾಣೆಯ ಎಸ್ಐ ಸೌಮ್ಯ ಹೇಳಿದ್ದಾರೆ. ಆದರೆ, ನಾವು ಆ ಧ್ವಜವನ್ನು ತೆಗೆಯುವುದಿಲ್ಲ" ಎಂದಿದ್ದಾರೆ.