ಕಾಸರಗೋಡು, ನ 25(SM): ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದ ಗ್ರಹಿಣಿಯೋರ್ವಳ ಮೃತದೇಹ ಹೊಳೆಯಲ್ಲಿ ಪತ್ತೆಯಾದ ಘಟನೆ ಶನಿವಾರ ಮಧ್ಯಾಹ್ನ ಜಿಲ್ಲೆಯ ಚೇರೂರ್ ಬಳಿ ನಡೆದಿದೆ. ಮೃತಪಟ್ಟವರನ್ನು ಚೇರೂರಿನ ಹಾರಿಸ್ ಎಂಬವರ ಪತ್ನಿ ರಮಿಸಾ(24) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಮಿಸಾ ನಾಪತ್ತೆಯಾಗಿದ್ದರು. ಮನೆಯವರು ಶೋಧ ನಡೆಸಿದಾಗ ಚೇರೂರಿನ ತೂಗು ಸೇತುವೆ ಸಮೀಪ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಠಾಣಾ ಪೊಲೀಸರು ಹಾಗೂ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದರು. ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಗೆ ಮೃತದೇಹ ಕೊಂಡೊಯ್ಯಲಾಗಿದೆ.
ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.