ಮಂಗಳೂರು, ನ 25(SM): ಶ್ರೀರಾಮನು ತ್ಯಾಗದ ಸ್ಪೂರ್ತಿ. ರಾಮ ಜನ್ಮಭೂಮಿ ನಮ್ಮ ತಾಯಿಯಂತೆ. ಆದ್ದರಿಂದ ಅದನ್ನು ತ್ಯಾಗ ಮಾಡುವ ಪ್ರಶ್ನೆಯೇ ಇಲ್ಲ. ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡ ರಾಮಮಂದಿರ ನಿರ್ಮಾಣ ಸಂಬಂಧಿಸಿದ ಜನಾಗ್ರಹ ಸಭೆಯನ್ನುದ್ದೇಶಿ ಅವರು ಮಾತನಾಡಿದರು. ರಾಮ ಮಂದಿರ ನಿರ್ಮಾಣ ಆಗದಿರೋದು ಹಿಂದೂ ರಾಷ್ಟ್ರಕ್ಕೆ ಅಪಮಾನ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಪ್ರಧಾನಿ ದೃಢ ನಿರ್ಧಾರ ಮಾಡಬೇಕು. ರಾಮಮಂದಿರ ನಿರ್ಮಾಣಕ್ಕಾಗಿ ಅಗತ್ಯ ಬಿದ್ದರೆ ಸಂಸತ್ ಸದಸ್ಯರು ರಾಜೀನಾಮೆ ನೀಡಲೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.
ಇನ್ನು ಸಭೆಯಲ್ಲಿ ಒಡಿಯೂರು ಸಂಸ್ಥಾನಂ ನ ಶ್ರೀ ಗುರುದೇವಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಸಭೆಯಲ್ಲಿ ಭಾಗವಹಿಸಿದ್ದರು.
ಇನ್ನು ಪ್ರಾರಂಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು.