ಬೆಳ್ತಂಗಡಿ, ಡಿ 02 (DaijiworldNews/MS): ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.1ರಂದು ಇಲ್ಲಿನ ಬಂಗಾಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬಿಹಾರ ಮೂಲದ ಚಂದನ್(35) ಎಂದು ಗುರುತಿಸಲಾಗಿದೆ. ಚಂದನ್ ಹಲವು ವರ್ಷಗಳ ಹಿಂದೆ ಬಂಗಾಡಿ ಸುತ್ತಮುತ್ತ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಆದರೆ ಸುಮಾರು 10 ತಿಂಗಳ ಹಿಂದೆ ಪತ್ನಿ ಮತ್ತು ಮಕ್ಕಳನ್ನು ತನ್ನೂರಿನಲ್ಲಿ ಬಿಟ್ಟು, ಬಂಗಾಡಿಗೆ ಮರಳಿ ಬಂದಿದ್ದು ಕಾಂಟ್ರಾಕ್ಟ್ ದಾರರೊಂದಿಗೆ ಸೆಂಟ್ರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಈ ನಡುವೆ ಡಿ.1 ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಲ್ಲರೊಂದಿಗೂ ಅನ್ಯೋನ್ಯವಾಗಿದ್ದ ಈತ ಯಾವ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾನೆ ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821