ಕೊಲ್ಲೂರು, ಡಿ 03 (DaijiworldNews/MS): ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಡಿ.03 ರ ಶುಕ್ರವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ರಾಜ್ಯಪಾಲರನ್ನು ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮರಾವ್, ಸಹಾಯಕ ಆಯುಕ್ತರಾದ ಕೆ.ರಾಜು, ಎಸ್ಪಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.