ವಿಟ್ಲ, ಡಿ.03 (DaijiworldNews/SM): ಬೈಕ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತವೊಂದರಲ್ಲಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎಂದು ಗುರುತಿಸಲಾಗಿದೆ. ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರ ಮಿಥುನ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.