ಮಂಗಳೂರು, ಡಿ 04 (DaijiworldNews/MS): ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ ಕೃಷ್ಣಪ್ಪ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 6ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಬುಧವಾರ ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಹೆತ್ತವರು ಗುರುವಾರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ.