ಅರಂತೋಡು, ಡಿ 04 (DaijiworldNews/MS): ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೆಲ್ತಡ್ಕದಲ್ಲಿ ಡಿ.04 ರ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23 ) ಎಂದು ಗುರುತಿಸಲಾಗಿದೆ
ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಮತ್ತು ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಢಿಕ್ಕಿ ಹೊಡೆದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ