ಉಪ್ಪಿನಂಗಡಿ, ಡಿ.06 (DaijiworldNews/SM): ಉಪ್ಪಿನಂಗಡಿ ಹಳೆಗೇಟು ಬಳಿ ಮೀನಿನ ವ್ಯಾಪಾರ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆ ಯತ್ನ ನಡೆಸಲಾಗಿದೆ.
ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಕಜೆಕಾರು ನಿವಾಸಿ ಅಶೋಕ್ ಶೆಟ್ಟಿ ಮೇಲೆ ದಾಳಿ ನಡೆಸಲಾಗಿದೆ. ಮುಸುಕುಧಾರಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಾಯಾಳು ಅಶೋಕ್ ಶೆಟ್ಟಿ ಪುತ್ತೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.