ಮಂಗಳೂರು, ಡಿ 09 (DaijiworldNews/MS): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ದೇಶದ ಸೇನಾ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತೀಯ ಸೈನ್ಯದ ವೀರ ಯೋಧರಿಗೆ ಮಂಗಳೂರಿನ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಮಾಜಿ ಯೋಧರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬೃಜೇಶ್ ಚೌಟ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪ್ರಮುಖರಾದ ಅಜೇಯ್ ಪ್ರಭು, ಸಂದೇಶ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.