ಉಡುಪಿ, ಡಿ 10 (DaijiworldNews/MS): ವಿದ್ಯಾರ್ಥಿನಿಯೊರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಬನ್ನಂಜೆ ಗರಡಿ ಸನಿಹ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ದೀಪಾ (15) ಎಂದು ತಿಳಿದುಬಂದಿದೆ.
ಕಳೆದ ಕೆಲ ವರ್ಷಗಳಿಂದ ಅವರ ಕುಟುಂಬವು ಉಡುಪಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಬಾಲಕಿ ಸ್ಥಳಿಯ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಳು, ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಳೆಂದು ತಿಳಿದುಬಂದಿದೆ.
ನಗರ ಪೊಲೀಸ್ ಠಾಣೆಯ ನಿರೀಕ್ಷಕ ಪ್ರಮೋದ್ ಕುಮಾರ್ ಅವರು ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ, ಸಾಗಿಸಲು ನಿತ್ಯಾನಂದ ಒಳಕಾಡು ಸಹಕರಿಸಿದರು.