ಮಂಗಳೂರು, ಡಿ 11 (DaijiworldNews/MS): ಸಹಪಾಠಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಜಪೆ ಶನೈಶ್ಚರ ದೇವಸ್ಥಾನ ಸಮೀಪದ ನಿವಾಸಿ ಎ .ಅಬೂಬಕರ್ ಸಿದ್ದೀಕ್ (21) ನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದೀಕ್ ಮತ್ತು ಅನ್ಯಧರ್ಮಕ್ಕೆ ಸೇರಿದ ಸಂತ್ರಸ್ತೆ ಯುವತಿ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು .ಆತ ಆ ಪೋಟೋವನ್ನು ಯುವತಿಗೆ ತೋರಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ವೈರಲ್ ಮಾಡುವುದಾಗಿ ಬೆದರಿಸಿದ್ದ. ಡಿ.೮ ರಂದು ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ವಾಪಾಸಾದಾಗ ಆರೋಪಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.