ಮಂಗಳೂರು, ನ 27(SM): ಬಸ್ಸೊಂದು ಡಿಕ್ಕಿ ಹೊಡೆದು ಪಾದಚಾರಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಬೋಜ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೋಜ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳವಾರದಂದು ಕೂಡ ತನ್ನ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿದ್ದರು. ಈ ಸಂದರ್ಭ ಯಮ ರೂಪಿಯಾಗಿ ಬಂದ ಖಾಸಗಿ ಬಸ್ ಬೋಜರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೋಜ ಬಸ್ ನಡಿಗೆ ಎಸೆಯಲ್ಪಟ್ಟಿದ್ದು, ಅವರ ದೇಹ ಛಿದ್ರಗೊಂಡಿದೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.