ಮುಲ್ಕಿ, ಡಿ.12 (DaijiworldNews/HR): ಚಪ್ಪಲಿ ಅಂಗಡಿಯೊಂದರಲ್ಲಿ ಮಹಿಳಾ ಗ್ರಾಹಕಿ ಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿ ಭಾನುವಾರ ನಡೆದಿದೆ.
ಮಹಿಳಾ ಗ್ರಾಹಕಿಗೆ ಅಂಗಡಿ ಮಾಲಿಕ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ, ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕಿಯ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ದಾಖಲಾಗಿದೆ.
ಈ ಬಗ್ಗೆ ಮಹಿಳಾ ಗ್ರಾಹಕಿ ನೀಡಿದ ದೂರಿನಂತೆ ಅಂಗಡಿ ಮಾಲಿಕನಾದ ಸಂಶುದ್ದೀನ್ (42 ) ಎಂಬಾತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಆರೋಪಿ ಅಂಗಡಿ ಮಾಲಕನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.