ಮಂಗಳೂರು, ಡಿ.15 (DaijiworldNews/HR): ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಅಹೋ ರಾತ್ರಿ ಹೋರಾಟ, ತರಗತಿ ಬಹಿಷ್ಕಾರ ನಡೆಸುತ್ತಿದ್ದು ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.
ಈ ವೇಳೆ ಅತಿಥಿ ಉಪನ್ಯಾಸಕರ ಸಮಿತಿ ಜಿಲ್ಲಾ ಉಪಾಧ್ಯಕ್ಷ ಗೋಪಾಲಕೃಷ್ಣ ಮಾತನಾಡಿ, "ಸರ್ಕಾರ ಅತಿಥಿ ಉಪನ್ಯಾಸಕರ ಯಾವುದೇ ಬೇಡಿಕೆ ಈಡೇರಿಕೆ ಮಾಡ್ತಾ ಇಲ್ಲ ಇದ್ರಿಂದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಒದಗಿಸುವ ಶಿಕ್ಷಕರು ಇದೀಗಾ ಬೀದಿಗೆ ಬರುವಂತಹ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸರ್ಕಾರ ಈ ಕೂಡಾ ಸೂಕ್ತ ಕ್ರಮ ಒದಗಿಸಿ ವೆಸ್ಟ್ ಬೆಂಗಾಲ್ ಮಾದರಿ ವೇತನ ವ್ಯವಸ್ಥೆ ಮತ್ತು ಸೇವಾ ಭದ್ರತೆಯನ್ನು ನೀಡಲಿ ಎಂದು ಆಗ್ರಹಿಸಿದರು.
ಈ ವೇಳೆ ಅತಿಥಿ ಉಪನ್ಯಾಸಕರ ಸಮಿತಿ ಜಿಲ್ಲಾಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ದಿಡ್ಡಿಮನಿ, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ಕೋಶಾಧಿಕಾರಿ ಮನೋಜ್ ಕುಮಾರ್ ಕೆ, ಮತ್ತಿತರರು ಉಪಸ್ಥಿತರಿದ್ದರು.