ಮಂಗಳೂರು, ಡಿ16 (DaijiworldNews/MS): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಅವರಿಂದ ಸುಮಾರು 36,43,270 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮೂಲದ ತಲಂಗರದ ಆರೋಪಿ ಮಹಿಳೆ ಡಿ.16 ರ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ತಪಾಸಣೆಗೊಳಪಡಿಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ
೨೪ ಕ್ಯಾರೆಟ್ ನ 739 ಗ್ರಾಂ ಚಿನ್ನವನ್ನು ಗಮ್ ರೂಪದಲ್ಲಿ ಪ್ಲಾಸ್ಟಿಕ್ ಪೌಚ್ ಗೆ ತುಂಬಿಸಿ ಅದನ್ನು ಒಳಉಡುಪಿನ ಒಳಗೆ ಹೊಲಿದು ಜೋಡಿಸಿಲಾಗಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.