ಮಂಗಳೂರು, ಡಿ.17 (DaijiworldNews/SM): ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಗೊಳಿಸುವುದನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಈ ವರದಿಯನ್ನು ರದ್ದುಪಡಿಸುವ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು, ಪಶ್ಚಿಮ ಘಟ್ಟ ತಪ್ಪಲಿನ ಜನತೆಯ ಬಗ್ಗೆ ನಿಜವಾಗಿ ಕಾಳಜಿ ಇದ್ದರೆ ಬಿಜೆಪಿ ಮುಖಂಡರು ಈ ಯೋಜನೆ ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಲಿ ಎಂದು ಅವರು ಸವಾಲು ಹಾಕಿದರು.